ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇಬ್ಬರು ಕೈದಿಗಳ ನಡುವೆಹೊಡೆದಾಟ ನಡೆದಿದೆ. ಗಲಾಟೆಯಲ್ಲಿ ಓರ್ವ ಕೈದಿ ಸ್ಕ್ರೂಡ್ರೈವರ್ನಿಂದ ಮತ್ತೊಬ್ಬ ಕೈದಿಗೆ ಐದು ಬಾರಿ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಶಂಕರ ಭಜಂತ್ರಿ ಕೊಲೆ ಮಾಡಲು ಯತ್ನಿಸಿದ ಕೈದಿ. ಮಂಡ್ಯ ಮೂಲದ ಸಾಯಿಕುಮಾರ್ ಗಾಯಗೊಂಡ ವಿಚಾರಣಾಧೀನ ಕೈದಿ. ಸಾಯಿಕುಮಾರ ಅವರಿಗೆ ಎದೆ, ಹೊಟ್ಟೆ, ಕಿವಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯ ಐ.ಸಿ.ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಜೈಲಿನಲ್ಲಿ ನಡೆದ ಈ ಘರ್ಷಣೆಯನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ಇಬ್ಬರು ಕೈದಿಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
tv24plus.in > Blog > ಜಿಲ್ಲೆ > ಬೆಳಗಾವಿ > ಜೈಲಿನ ಕೈದಿಗಳಿಬ್ಬರ ಪರಸ್ಪರ ಹೊಡೆದಾಟ
the authorTV24 News Desk
All posts byTV24 News Desk
Leave a reply








