ರಾಜ್ಯ

ಕೊನೆಗೂ ಮೌನ ಮುರಿದ ವೀರೇಂದ್ರ ಹೆಗ್ಗಡೆ..!

ಬೆಳಗಾವಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು ದಶಕಗಳೇ ಉರುಳಿದರೂ ನ್ಯಾಯ ಸಿಕ್ಕಿಲ್ಲ.  ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸತತ ಆರೋಪ ಮಾಡಲಾಗುತ್ತಿದೆ. ಆರೋಪ-ಪ್ರತ್ಯಾರೋಪ ,  ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆಗಳು ಜೋರಾಗಿದೆ. ಸತತ ಆರೋಪ ಎದುರಿಸಿದರೂ ಮೌನವಾಗಿದ್ದ ಡಾ.ಡಿ ವಿರೇಂದ್ರ ಹೆಗ್ಗಡೆ ಕೊನೆಗೂ ಮೌನ ಮುರಿದಿದ್ದಾರೆ. 
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ  ಹಾಗೂ ಹೆಗ್ಗಡೆ ಕುಟುಂಬದ  ವಿರುದ್ಧ ಆರೋಪ ಕೇಳಿ ಬರುತ್ತಿವೆ. ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ  ಬೇಸರ ವ್ಯಕ್ತಪಡಿಸಿದ್ದಾರೆ.
 2012‌ರಲ್ಲಿ ನಡೆದ ಸೌಜನ್ಯ ಹತ್ಯೆಗೆ ನ್ಯಾಯ ದೊರಕಿಸಿಕೊಡಲು ನಮ್ಮ ಕುಟುಂಬ ಒತ್ತಾಯಿಸಿತ್ತು. ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದೇವೆ. ಸಿಐಡಿ  ಬಳಿಕ ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐ  ತನಿಖೆ ನಡೆಸಿತ್ತು. ಇದೀಗ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಇದೀಗ ಮತ್ತೆ ಕ್ಷೇತ್ರ ಹಾಗೂ ನಮ್ಮ ಕುಟುಂಬದ ಮೇಲೆ‌ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಬೇಸರ ಹೊರ ಹಾಕಿದ್ದಾರೆ.
ಈ ಪ್ರಕರಣ ಸರ್ಕಾರ ಹಾಗೂ ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿದೆ. ಹೀಗಾಗಿ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಕೊಡಲು ಒತ್ತಾಯಿಸ್ತೇನೆ. ಸುಳ್ಳು ಹೇಳಿಕೆ, ಅಪಾದನೆ, ವದಂತಿಗಳಿಗೆ ಭಕ್ತರು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಬೇಡಿ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪತ್ರಿಕಾ ಹೇಳಿಕೆ‌ ನೀಡಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!