ಬೆಳಗಾವಿಬೆಳಗಾವಿ ನಗರ

ಕ್ಷೇತ್ರದ ಶಾಲೆಗಳನ್ನು ಸುಧಾರಿಸುತ್ತೇನೆ: ರಾಜು ಸೇಠ 

ಬೆಳಗಾವಿ: ಶಾಸಕ ಆಸಿಫ್ (ರಾಜು) ಸೇಠ ಅವರು ಬುಧವಾರ ವಂಟಮೂರಿ ಕಾಲೋನಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಆರು ಹೊಸ ತರಗತಿ ಕೊಠಡಿಗಳ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೇಠ್, “ಮಕ್ಕಳು ಈ ದೇಶದ ಭವಿಷ್ಯ, ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಸಲುವಾಗಿ ನನ್ನ ಕ್ಷೇತ್ರದ ಶಾಲೆಗಳ ಸ್ಥಿತಿಯನ್ನು ಸುಧಾರಿಸಲು ನಾನು ನಿರಂತರವಾಗಿ ಶ್ರಮಿಸುತ್ತೇನೆ.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ನಾನು ಸಾಧ್ಯವಿರುವಷ್ಟು ಎಲ್ಲ ಪ್ರಯತ್ನವನ್ನೂ ಮಾಡುತ್ತೇನೆ.  ಎಸ್.ಎಸ್.ಎಲ್.ಸಿ.ಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ 50,000 ರೂ., ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪಿಯುಸಿಯಿಂದ ಪದವಿವರೆಗಿನ ಶಿಕ್ಷಣದ ವೆಚ್ಚವನ್ನು ವೈಯಕ್ತಿಕವಾಗಿ ನೀಡುವುದಾಗಿ ಭರವಸೆ ನೀಡಿದರು.
TV24 News Desk
the authorTV24 News Desk

Leave a Reply