Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ರಾಜ್ಯ

ನಟ ಉಪೇಂದ್ರ ವಿರುದ್ಧ FIR ದಾಖಲು..!

ಬೆಂಗಳೂರು: ಕನ್ನಡ ಚಿತ್ರರಂಗದ ರಿಯಲ್​ ಸ್ಟಾರ್​ ಉಪೇಂದ್ರ ವಿರುದ್ಧ ಇಂದು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಾತಿ ನಿಂದನೆ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ನಟ ಉಪೇಂದ್ರ ಅವರು ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಯೊಂದು ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಇದೀಗ ನಿರ್ದಿಷ್ಟ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಉಲ್ಲೇಖಿಸಿ ದೂರು ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಂದ ದೂರು ಸ್ವೀಕರಿಸಿದ ಪೊಲೀಸರು, ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
 
ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಲ್ಲದೇ, ಅವಹೇಳನ ಶಬ್ಧ ಬಳಕೆ ಮಾಡಿದ್ದಾರೆ ಎಂದು ಉಪೇಂದ್ರ ವಿರುದ್ಧ ಮದೂಸೂಧನ್ ಕೆ.ಎಸ್ ಎಂಬುವವರು ದೂರು ಸಲ್ಲಿಸಿದ್ದಾರೆ. ನಟನ ಪೋಸ್ಟ್​ ಮತ್ತು ಹೇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.
ತನ್ನ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಉಪೇಂದ್ರ, ತಾವು ಹಾಕಿದ್ದ ವಿಡಿಯೋವನ್ನು ಫೇಸ್ ಬುಕ್ ಮತ್ತು ಸಾಮಾಜಿಕ ಜಾಲತಾಣದಿಂದ ಡಿಲೀಟ್​ ಮಾಡಿದ್ದಾರೆ. ಬಳಿಕ ಕ್ಷಮೆ ಕೂಡ ಕೇಳಿದ್ದಾರೆ.
ಇಂದು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು. . ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋ ವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ.. ಮತ್ತು ಈ ಮಾತಿಗೆ ಕ್ಷಮೆಯಿರಲಿ.. ಎಂದು ಉಪೇಂದ್ರ ಬರೆದಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!