ರಾಜ್ಯ

ಚಂದ್ರಯಾನ-3 ಇತಿಹಾಸ ಸೃಷ್ಟಿಗೆ ಕ್ಷಣಗಣನೆ…!  

ಭಾರತದ ಐತಿಹಾಸಿಕ ಕ್ಷಣ ಚಂದ್ರಯಾನ-3 ಯಶಸ್ಸಿಗೆ ಇನ್ನೊಂದು ಮೆಟ್ಟಿಲಷ್ಟೇ ಬಾಕಿಯಿದ್ದು, ನೂರಾ ನಲವತ್ತು ಕೋಟಿ ಭಾರತೀಯರ ಶುಭ ಹಾರೈಕೆ ಹಾಗೂ ಪ್ರಾರ್ಥನೆಯೊಂದಿಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಇಂದು ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿರುವ ಈ ಐತಿಹಾಸಿಕ ಸಂದರ್ಭಕ್ಕೆ ಕ್ಷಣಗಣನೆ ಆರಂಭವಾಗಿದೆ.
 
ಇಸ್ರೋದ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಂದು ಸಂಜೆ ಲ್ಯಾಂಡ್ ಆಗಲಿದೆ. ಇದಕ್ಕಾಗಿ ಇಡೀ ವಿಶ್ವವೇ ಅದರ ಮೇಲೆ ದೃಷ್ಟಿ ನೆಟ್ಟಿದೆ. ಈ ಅದ್ಭುತವನ್ನು ಸಾಸುವ ಮೂಲಕ ಬಾಹ್ಯಾಕಾಶದಲ್ಲಿ ಸಾಧನೆ ಮಾಡಿದ ಇತರ ರಾಷ್ಟ್ರಗಳಲ್ಲಿ ಭಾರತವೂ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಸಿದ್ಧವಾಗಿದೆ. ಏಕೆಂದರೆ ಇದು ಚಂದ್ರನ ದಕ್ಷಿಣ ಧೃವವನ್ನು ತಲುಪಲಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಳ್ಳಲಿದೆ.
TV24 News Desk
the authorTV24 News Desk

Leave a Reply