ರಾಜ್ಯ

ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್..! 

ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿಯಾಗಿ ಇಳಿಕೆಯಾಗಿದೆ. ಆ ಮೂಲಕ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಮಾಡಿದ ಮೊದಲ ದೇಶ ಎಂಬ ಹೆಗ್ಗಳಿಕೆ ಭಾರತ ಪಾತ್ರವಾಗಿದೆ ಎಂದು ಚಂದ್ರಯಾನ-3 ಪ್ರಾಜೆಕ್ಟ್​ ನಿರ್ದೇಶಕ ವೀರ ಮುತ್ತುವೇಲ್​ ಹೇಳಿದರು. ಲಾಂಚ್​​ನಿಂದ ಲ್ಯಾಂಡ್ ಆಗುವ ತನಕ ಅಂದುಕೊಂಡಂತೆ ನಡೆದಿದೆ ಎಂದರು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. 
 
ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಸಂಜೆ 6.04ಕ್ಕೆ ಸರಿಯಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಅನ್ನು ಸುಸೂತ್ರವಾಗಿ ಇಳಿಸಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.
ಚಂದ್ರಯಾನ-3ರ ಲ್ಯಾಂಡರ್‌ನ ಸಾಫ್ಟ್ ಲ್ಯಾಂಡಿಂಗ್‌ಗೆ 15 ರಿಂದ 17 ನಿಮಿಷಗಳನ್ನು ತೆಗೆದುಕೊಂಡಿತು. ಚಂದ್ರಯಾನ 3 ಅನ್ನು 14 ಜುಲೈ 2023ರಂದು ಮಧ್ಯಾಹ್ನ 2.30 ಕ್ಕೆ ಉಡಾವಣೆ ಮಾಡಲಾಗಿತ್ತು
ಚಂದ್ರನ ದಕ್ಷಿಣ ಧ್ರುವವನ್ನು ಚಂದ್ರಯಾನ 3ಕ್ಕೆ ಇಳಿಯುವ ಸ್ಥಳವಾಗಿ ನಿಗದಿಪಡಿಸಲಾಗಿತ್ತು. ಇದು ಶಾಶ್ವತ ನೆರಳಿನ ಪ್ರದೇಶವಾಗಿದ್ದು, ವಿಜ್ಞಾನಿಗಳು ಇಲ್ಲಿ ಸಂಪನ್ಮೂಲಗಳು ಸಮೃದ್ಧವಾಗಿದೆ. ಭವಿಷ್ಯದಲ್ಲಿ ಮಾನವಸಹಿತ ಕಾರ್ಯಾಚರಣೆಗಳಿಗೆ ಸೂಕ್ತವಾದ ಲ್ಯಾಂಡಿಂಗ್ ಸೈಟ್ಗಳನ್ನು ನೀಡಬಹುದು ಎಂದು ನಂಬಿದ್ದಾರೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಈ ಪ್ರದೇಶದಲ್ಲಿ ಮೊದಲ ಬಾರಿಗೆ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ
TV24 News Desk
the authorTV24 News Desk

Leave a Reply

error: Content is protected !!