Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ರಾಜ್ಯ

KSRTC ಬಸ್ ಕಾರು ಡಿಕ್ಕಿ:6 ಜನ ದುರ್ಮರಣ..! 

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. 
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ಅಪಘಾತ ಸಂಭವಿಸಿದ್ದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಎ01ಎಂಎಫ್ 8055 ಸಂಖ್ಯೆಯ ಟೊಯೊಟೊ ಕ್ವಾಲಿಸ್ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇನ್ನು ಅಪಘಾತದ ವೇಳೆ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಕ್ರೇನ್ ಮೂಲಕ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ.
ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
TV24 News Desk
the authorTV24 News Desk

Leave a Reply

error: Content is protected !!