ಬೆಳಗಾವಿರಾಜ್ಯ

ಬೆಳಗಾವಿ ವಿಭಜನೆ  ವಿಚಾರ ಸದ್ಯಕ್ಕಿಲ್ಲ: ಡಿ.ಕೆ.ಶಿವಕುಮಾರ

ಬೆಳಗಾವಿ: ರಾಜ್ಯದ ಅತೀ ದೊಡ್ಡ ಜಿಲ್ಲೆಯಾಗಿದೆ. 18 ವಿಧಾನಸಭೆ ಕ್ಷೇತ್ರ, 15 ತಾಲೂಕು ಹೊಂದಿರುವ ಬೆಳಗಾವಿ ಜಿಲ್ಲೆಯ ವಿಭಜನೆ ಎನ್ನುವುದು ಜೇನುಗುಡು ಈ ಇದಕ್ಕೆ ಸದ್ಯ ಇರುವ ಬಿಜೆಪಿ ಸರ್ಕಾರ ಕೈ ಹಾಕಲಿದೆಯೆ ಎಂಬ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಜಿಲ್ಲೆಯಲ್ಲಿ ಚರ್ಚೆಗಳು ಆರಂಭವಾಗಿವೆ. ಬೆಳಗಾವಿ ಜಿಲ್ಲೆ 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, 18 ವಿಧಾನಸಭೆ, 3 ಲೋಕಸಭೆ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ. 15 ತಾಲೂಕು, 6 ಆರ್ ಟಿ ಓ ಕಚೇರಿ, 506 ಗ್ರಾಮ ಪಂಚಾಯತ್, 345 ತಾಲೂಕು ಪಂಚಾಯತ್ ಸದಸ್ಯರು, 90 ಜಿಲ್ಲಾ ಪಂಚಾಯತ್ ಸದಸ್ಯರನ್ನು ಹೊಂದಿದೆ. ಇನ್ನು ಬೆಳಗಾವಿ, ಗೋಕಾಕ, ಹುಕ್ಕೇರಿ, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಅಥಣಿ, ಚಿಕ್ಕೋಡಿ, ರಾಯಬಾಗ, ಖಾನಾಪುರ, ಕಿತ್ತೂರು, ಕಾಗವಾಡ, ನಿಪ್ಪಾಣಿ ಹಾಗೂ ಮೂಡಲಗಿ ಜಿಲ್ಲೆಯ ತಾಲೂಕುಗಳಾಗಿವೆ.
ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಮೂರು ಜಿಲ್ಲೆಗಳನ್ನಾಗಿಸುವ ವಿಚಾರದ ಬಗ್ಗೆ ಯಾವುದೇ ತೀರ್ಮಾನವನ್ನು ಸದ್ಯಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಗಳೂರು : ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಮೂರು ಜಿಲ್ಲೆಗಳನ್ನಾಗಿಸುವ ವಿಚಾರದ ಬಗ್ಗೆ ಯಾವುದೇ ತೀರ್ಮಾನವನ್ನು ಸದ್ಯಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ವಿಭಜನೆ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ.ಆದರೆ, ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ರಾಮನಗರ, ಗದಗ, ಚಾಮರಾಜನಗರ ಜಿಲ್ಲೆಗಳಲ್ಲಿ ನಾಲ್ಕು ಹಾಗೂ ಕೊಡಗು ಜಿಲ್ಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿವೆ.ಅದರಿಂದ ಆಡಳಿತ ಸುಗಮವಾಗಿ ಸಾಗುತ್ತಿದೆ. ಬೆಳಗಾವಿ ವಿಭಜನೆ ಕುರಿತು ಯಾರೂ ಅನಗತ್ಯವಾಗಿ ಗಾಬರಿಯಾಗುವ ಅಗತ್ಯವಿಲ್ಲ. ಸಮಾಲೋಚನೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
TV24 News Desk
the authorTV24 News Desk

Leave a Reply