ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಮಹತ್ವದ ಮಾಹಿತಿ ನೀಡಿದ್ದಾರೆ. ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.
ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಕಳುಹಿಸಲಾಗಿದೆ. ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ 4 ಕೋಟಿ 7 ಲಕ್ಷ ರೂ. ನೀಡಲಾಗಿದ್ದು, ಈ ಬಾರಿ 17 ಕೋಟಿ ರೂ. ಮೀಸಲಿಡಲಾಗಿದೆ ಎಂಬ ಮಾಹಿತಿಯನ್ನೂ ಸಚಿವರು ನೀಡಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯಿಂದ ಇನ್ನೂ ಎರಡು ಇಲ್ಲವೇ ಮೂರು ತಿಂಗಳಲ್ಲಿ ಅಗ್ರಿಗೇಟರ್ ಆ್ಯಪ್ ಬಿಡುಗಡೆ ಮಾಡಲಾಗುತ್ತದೆ. ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ನೀಡಲಾಗುತ್ತದೆ.