ಬೆಳಗಾವಿ ಜಿಲ್ಲೆಯ ಕಿತ್ತೂರು ವೀರರಾಣಿ ಚೆನ್ನಮ್ಮನ ಉತ್ಸವವನ್ನು ಇದೇ ಮೊದಲ ಬಾರಿಗೆ ಸರ್ಕಾರ ರಾಜ್ಯಮಟ್ಟದ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ಧತೆ ಮಾಡಿಕೊಂಡಿದೆ. ಆದರೆ, ರಾಜ್ಯಮಟ್ಟದ ಕಿತ್ತೂರು ಉತ್ಸವ ಆಮಂತ್ರಣ ಪತ್ರಿಕೆಯಲ್ಲಿ ಸಾಲು ಸಾಲು ಅದ್ವಾನ ಆರೋಪ ಕೇಳಿಬಂದಿದೆ.
ಕಿತ್ತೂರು ಉತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರವೇ ಮಾಯವಾಗಿದ್ದು, ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ ರಾಯಣ್ಣನ ಫೋಟೋ ಹಾಕದಿದ್ದಕ್ಕೆ ರಾಯಣ್ಣನ ಅಭಿಮಾನಿಗಳು ಅಸಮಾಧಾನ ಹೊರಹಾಕಿದರು.
ಕಿತ್ತೂರು ಉತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬಲಗೈ ಬಂಟ ರಾಯಣ್ಣನ ಫೋಟೋ ಹಾಕದಿದ್ದಕ್ಕೆ ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ರಾಯಣ್ಣನ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಅ. 23 ರಿಂದ 3 ದಿನಗಳ ಕಾಲ ರಾಜ್ಯಮಟ್ಟದ ಕಿತ್ತೂರು ಉತ್ಸವ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಕಿತ್ತೂರು ಉತ್ಸವ ರಾಜ್ಯಮಟ್ಟದ ಉತ್ಸವವಾಗಿ ಪರಿವರ್ತನೆಗೊಂಡಿದೆ. ಆದರೆ, ಆಮಂತ್ರಣ ಪತ್ರಿಕೆಯಲ್ಲಿ ಸ್ಥಳೀಯ ಶಾಸಕ ಮಹಾಂತೇಶ್ ದೊಡ್ಡಗೌಡರ ಪತ್ನಿಯ ಹೆಸರು ಆಹ್ವಾನ ಪತ್ರಿಕೆಯಲ್ಲಿ ಹಾಕಿದ್ದಾರೆ.