Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಮೈತ್ರಿಯಿಂದ ಇನ್ನಷ್ಟು ಶಕ್ತಿ ರಮೇಶ್ ಜಾರಕಿಹೊಳಿ..!  

ಬೆಂಗಳೂರು: ಜೆಡಿಎಸ್, ಬಿಜೆಪಿ ಮೈತ್ರಿ ಚರ್ಚೆ ಬೆನ್ನಲ್ಲೇ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ಜೆಡಿಎಸ್, ಬಿಜೆಪಿ ಮೈತ್ರಿ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು. ಸುಮಾರು ಅರ್ಧ ಗಂಟೆಗಳ ಕಾಲ ಹೆಚ್​ಡಿ ಕುಮಾರಸ್ವಾಮಿ ಜೊತೆ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದರು. ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರವಾಗಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಭೇಟಿ ಬಳಿಕ ಶಾಸಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಹೆಚ್​.ಡಿ.ಕುಮಾರಸ್ವಾಮಿ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಹೆಚ್​.ಡಿ.ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದೆ ಎಂದರು. ಒಳ್ಳೆದಾಗಲಿ ಎಂದು ಹಾರೈಸಿದ್ದೇನೆ. ಹೈಕಮಾಂಡ್ ನಿರ್ಧಾರಕ್ಕೆ ಸ್ವಾಗತ. ಆದಷ್ಟು ಬೇಗ ಮೈತ್ರಿ ಆದರೆ ಒಳ್ಳೆಯದು. ರಾಜ್ಯದ ಕೆಟ್ಟ ಸರ್ಕಾರ ತೆಗೆಯಲು ಮುಂದಿನ ದಿನಗಳಲ್ಲಿ ಹೋರಾಟ ಮಾಡಲು ಕುಮಾರಸ್ವಾಮಿ ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಮೈತ್ರಿಯಿಂದ ಇನ್ನಷ್ಟು ಶಕ್ತಿ ಬರಲಿದೆ. ಮೈತ್ರಿ ಆದರೆ ಹೈಕಮಾಂಡ್ ನಿರ್ಧಾರಕ್ಕೆ ಒಪ್ಪಿಗೆ ಇದೆ. ಈಗ ಹೇಳೋಕೆ ಆಗಲ್ಲ ಎಂದರು.
TV24 News Desk
the authorTV24 News Desk

Leave a Reply

error: Content is protected !!