Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ಕಿತ್ತೂರು ಮರ್ಡರ್ ಎಸ್ಪಿ ಏನು ಹೇಳಿದರು?

ಬೆಳಗಾವಿ: ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಬೆಳಗಾವಿ ಎಸ್ಪಿ ಡಾ ಭೀಮಾಶಂಕರ ಗುಳೇದ ಅವರು, ತಿಗಡೊಳ್ಳಿಯ ವಿಜಯ ಆರೇರ್(32) ಕೊಲೆಯಾದ ಯುವಕ. ಅದೇ ಗ್ರಾಮದ ಕಲ್ಲಪ್ಪ ಕ್ಯಾತನವರ(48) ಕೊಲೆಗೈದ ಆರೋಪಿ ಎಂದರು.
ತಿಗಡೊಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಪರಸ್ಪರ ಹೊಡೆದಾಡಿಕೊಂಡು ಅದರಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದಾರೆ.
2011ರಲ್ಲಿ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಜಯ್ ಅವರ ತಂದೆ-ತಾಯಿ ಹತ್ಯೆಯಾಗಿತ್ತು. ಆ ಪ್ರಕರಣದಲ್ಲಿ ಕಲ್ಲಪ್ಪನ ಸಂಬಂಧಿಕರು ಭಾಗಿಯಾಗಿದ್ದರು. ಇದರಲ್ಲಿ ಶಿಕ್ಷೆಗೆ ಗುರಿಯಾದವರಿಗೆ ಜಾಮೀನು ಕೊಡಿಸಲು ಕಲ್ಲಪ್ಪ ಮತ್ತು ಭರತ್ ಪ್ರಯತ್ನಿಸಿದ್ದರು. ಇದು ವಿಜಯ್ ಸಿಟ್ಟಿಗೆ ಕಾರಣವಾಗಿತ್ತು. ಹಾಗಾಗಿ ಕೆಲ ದಿನಗಳ ಹಿಂದೆಯಷ್ಟೇ ಕಲ್ಲಪ್ಪನ ಮನೆಗೆ ಹೋಗಿ ವಿಜಯ್ ಗಲಾಟೆ ಕೂಡ ಮಾಡಿದ್ದ. ಇನ್ನು ಭಾನುವಾರ ಭರತ್ ಮತ್ತು ವಿಜಯ್ ಮಧ್ಯೆ ವಾಗ್ವಾದ ಆಗಿತ್ತು. ಇದಾದ ಅರ್ಧ ಗಂಟೆ ಬಳಿಕ ಕಲ್ಲಪ್ಪನ ಮನೆಗೆ ಹೋಗಿದ್ದ ವಿಜಯ್, ಮಾತುಕತೆಗೆ ಬರುವಂತೆ ಹೇಳಿದ್ದಾನೆ. ಇದೇ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಿದರು.
ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಜಯ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಕಲ್ಲಪ್ಪ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಕೊಲೆಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಎಸ್‌ಪಿ ಡಾ ಭೀಮಾಶಂಕರ ಗುಳೇದ ತಿಳಿಸಿದರು.
TV24 News Desk
the authorTV24 News Desk

Leave a Reply

error: Content is protected !!