Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಬಸ್ ಮರಕ್ಕೆ ಡಿಕ್ಕಿ,ಪಲ್ಟಿ:20 ವಿದ್ಯಾರ್ಥಿಗಳಿಗೆ ಗಾಯ

ರಾಮದುರ್ಗ:  ಬಿಜಗುಪ್ಪಿ ಗ್ರಾಮದಲ್ಲಿ ಬಸ್ ಫ್ರಂಟ್ ಆಕ್ಸೆಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಹೊರಟಿದ್ದ ಬಸ್ ಇದಾಗಿದ್ದು, ಇದರಲ್ಲಿ 50ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಾಮದುರ್ಗಕ್ಕೆ ಹೋಗುತ್ತಿದ್ದ ಬಸ್ ಚಲಿಸುತ್ತಿದ್ದಾಗಲೇ ಬಸ್ನ ಆಕ್ಸೆಲ್ ಕಟ್ ಆಗಿದೆ. ಆಕ್ಸೆಲ್ ಕಟ್ ಆದ ಕೂಡಲೇ ನಿಯಂತ್ರಣ ಕಳೆದುಕೊಂಡ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಡಿಕ್ಕಿ ಹೊಡೆದ ಬಸ್ ಅಲ್ಲೇ ಪಲ್ಟಿಯಾಗಿದೆ.ಬೆಳಗ್ಗಿನ ಹೊತ್ತಾಗಿರುವುದರಿಂದ ಬಸ್ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿದ್ದರು. ಗ್ರಾಮಸ್ಥರು ಕೂಡಲೇ ಅಂಬ್ಯುಲೆನ್ಸ್ಗೆ ಕರೆ ಮಾಡಿ ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಹಲವರಿಗೆ ಗಾಯಗಳಾಗಿದ್ದರು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನುವುದು ಸಮಾಧಾನದ ವಿಷಯ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
TV24 News Desk
the authorTV24 News Desk

Leave a Reply

error: Content is protected !!