Uncategorizedಬೆಳಗಾವಿರಾಜ್ಯ

ಬೆಳಗಾವಿಯ ಒಂದು ಬ್ಯಾಂಕಿನ ರಾಜಕೀಯಕ್ಕೆ ನಾನು ಬಲಿಪಶು.HDK

ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಬೀಳುತ್ತದೆ. 2024ಕ್ಕೆ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಬಿಡದಿಯ ತಮ್ಮ ತೋಟದ ಮನೆಯಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕವಾಗಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ.
ಆಮೇಲೆ ಅವರು ನನ್ನನ್ನು ನಡುರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು. 2018 ಸರ್ಕಾರ ಹೋಗಿದ್ದು ಡಿ.ಕೆ ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ. ನನಗೂ ರಮೇಶ್ ಜಾರಕಿಹೊಳಿ ಅವರಿಗೂ ವೈಷಮ್ಯ ಇತ್ತಾ? ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಯಾಕೆ? ನಾನು ಕುಮಾರಣ್ಣನ ಸರ್ಕಾರ ಉಳಿಸೋಕೆ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಮೊಸಳೆ ಕಣ್ಣೀರು ಹಾಕಿ ಪ್ರಚಾರ ತೆಗೆದುಕೊಂಡರು. ಆಮೇಲೆ ನೋಡಿದರೆ ಒಳಗೊಳಗೇ ಮಾಡುವುದೆಲ್ಲ ಮಾಡಿದರು ಎಂದು ಅಸಮಾಧಾನ ಹೊರಹಾಕಿದರು..

TV24 News Desk
the authorTV24 News Desk

Leave a Reply