ಕೊಪ್ಪಳ

ವಿದ್ಯಾರ್ಥಿನಿಗೆ ಬಿಯರ್ ಕುಡಿಸಿ ಅತ್ಯಾಚಾರ..! 

ಕೊಪ್ಪಳ: ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳಕ್ಕೆ ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಸಣಾಪುರ ಬಳಿಯ ಹೋಟೆಲ್‌ನಲ್ಲಿ ಅತ್ಯಾಚಾರ ಎಸಗಲಾಗಿದ್ದು, ಆರೋಪಿಗಳಾದ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಬಿಕಾಂ ವ್ಯಾಸಾಂಗ ವ್ಯಾಸಾಂಗ ಮಾಡುತ್ತಿದ್ದ ಯುವತಿ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದಳು. ಈ ವೇಳೆ ಅಣ್ಣ ಬಂದಿರುವುದಾಗಿ ಹೇಳಿದಾಗ ವಿದ್ಯಾರ್ಥಿನಿ ಕಾಲೇಜಿನಿಂದ ಹೊರಗಡೆ ಹೋಗಿದ್ದಾಳೆ. ಈ ವೇಳೆ ಆರೋಪಿಗಳು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳ ಜಿಲ್ಲೆಯ ಸಣಾಪುರ ಬಳಿಯ ಅಂತರಾಳ ಕೆಫೆ ಹೋಟೆಲ್‌ಗೆ ಕರೆದೊಯ್ದಿದ್ದಾರೆ.
ಬಳಿಕ ಬಿಯರ್ ಕುಡಿಸಿ ಮತ್ತು ಬರಿಸಿದ ಆರೋಪಿಗಳು ಆಕೆಯ ಮೇಲೆ ಸ್ನೇಹಿತ ಸೇರಿದಂತೆ ನಾಲ್ವರು ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಸಂತ್ರಸ್ತ ಯುವತಿಯು ಬಳ್ಳಾರಿ ನಗರದ ಕೌಲ್ ಬಜಾರ್‌ನ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.  
TV24 News Desk
the authorTV24 News Desk

Leave a Reply

error: Content is protected !!