Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ..!   

ಬೆಳಗಾವಿ: ನಗರದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ದ್ರಾಕ್ಷಾಯಿಣಿ ಚೌಶೆಟ್ಟಿ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಇಪ್ಪತ್ತೈದು ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.
ಕಚೇರಿಯಲ್ಲೇ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಜಂಟಿ ಆಯುಕ್ತ ದ್ರಾಕ್ಷಾಯಿಣಿ ಅವರನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.
ವಿಕಾಸ್ ಕೋಕಣೆ ಎಂಬುವವರಿಂದ 25ಸಾವಿರ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು.ಜಿಎಸ್‌ಟಿ ವಿಚಾರವಾಗಿ ವ್ಯಾಜ್ಯ ಬಗೆ ಹರಿಸಿ ಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಕುರಿತು ಲೋಕಾಯುಕ್ತ ಠಾಣೆಯಲ್ಲಿ ದೂರು ನೀಡಿದ್ದ ವಿಕಾಸ್.ಲೋಕಾಯುಕ್ತ ಅಧಿಕಾರಿಗಳಿಂದ ವಿಚಾರಣೆ ಮುಂದುವರೆದಿದೆ.
TV24 News Desk
the authorTV24 News Desk

Leave a Reply

error: Content is protected !!