Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ದೇಗುಲ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು  ಮಾಡಿಸಿದ ಗ್ರಾಮೀಣ  ಶಾಸಕಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳ್ಳಿ ಗ್ರಾಮದ ಶ್ರೀ ಮಾರುತಿ, ಶ್ರೀ ವಿಠ್ಠಲ ರುಕ್ಮಾಯಿ ಹಾಗೂ ಶ್ರೀ ಕಲ್ಮೇಶ್ವರ ದೇವಸ್ಥಾನಗಳ ನೂತನ ಕಟ್ಟಡ ನಿರ್ಮಾಣಕ್ಕಾಗಿ ಕರ್ನಾಟಕ ಸರಕಾರದಿಂದ ಎರಡು ಕೋಟಿ ರೂ. ಗಳನ್ನು ಗ್ರಾಮೀಣ  ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮಂಜೂರು ಮಾಡಿಸಿದ್ದು, 50 ಲಕ್ಷ  ರೂ.ಗಳನ್ನು  ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ.

ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದ ಜನರೆಲ್ಲರೂ ಸೇರಿ ಅರಿಶಿಣ ಕುಂಕುಮ ಕಾರ್ಯಕ್ರಮ ಏರ್ಪಡಿಸಿ, ಲಕ್ಷ್ಮೀ ಹೆಬ್ಬಾಳಕರ ಹಾಗೂ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಗ್ರಾಮಕ್ಕೆ ಆಹ್ವಾನಿಸಿ, ಸನ್ಮಾನಿಸಿದರು.

TV24 News Desk
the authorTV24 News Desk

Leave a Reply

error: Content is protected !!