Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಕಬ್ಬು ಸಾಗಿಸುತ್ತಿದ್ದ 2 ಟ್ರ್ಯಾಕ್ಟರ್‌ಗಳಿಗೆ ಬೆಂಕಿ..! 

ನಿಪ್ಪಾಣಿ: ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ 2 ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಮಹಾರಾಷ್ಟ್ರದ ಹುಪರಿಯ ಜವಾಹರ ಸಕ್ಕರೆಗೆ ಸಾಗಿಸುತ್ತಿದ್ದ ಕಬ್ಬು ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಮಹಾರಾಷ್ಟ್ರದಲ್ಲಿ ಮಾಜಿ ಸಂಸದ ರಾಜು ಶೆಟ್ಟಿ ನೇತೃತ್ವದ ಸ್ವಾಭಿಮಾನಿ ರೈತ ಸಂಘಟನೆಯಿಂದ ಪ್ರಸ್ತಕ ವರ್ಷದ ಕಬ್ಬಿಗೆ 3500 ರೂಪಾಯಿ ದರ ಹಾಗೂ ಕಳೆದ ವರ್ಷ ಹೋದ ಕಬ್ಬಿಗೆ ಹೆಚ್ಚುವರಿಯಾಗಿ ಟನ್‌ಗೆ 400 ರೂಪಾಯಿ ದರ ನೀಡಬೇಕು ಇಲ್ಲವಾದ್ರೆ ಸಕ್ಕರೆ ಕಾರ್ಖಾನೆಗಳು ಪ್ರಾರಂಭಿಸಬಾರದೆಂದು ಪ್ರತಿಭಟನೆಗಳು ನಡೆಯುತ್ತಿದೆ. ಈ ನಡುವೆ ಕರ್ನಾಟಕದಿಂದ ಮಹಾರಾಷ್ಟ್ರ ಜವಾಹಲರ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ 2 ಟ್ರ್ಯಾಕ್ಟರಗೆ ಕಾರದಗಾ-ರೇಂದಾಳ ರಸ್ತೆಯ ಮಧ್ಯೆ ಕಬ್ಬು ತುಂಬಿದ ಟ್ರ್ಯಾಕ್ಟರಗೆ ಬೆಂಕಿ ಹಚ್ಚಲಾಗಿದೆ.
ಟ್ರ್ಯಾಕ್ಟರ್ ಮಾಲೀಕ ಸದಲಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!