Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಎಟಿಎಂ ಕೊರೆದು 20 ಲಕ್ಷ ದೋಚಿದ ಕಳ್ಳರು..! 

ಚಿಕ್ಕೋಡಿ: ಗ್ಯಾಸ್ ಕಟರ್ ಬಳಸಿ ಎಸ್‌ಬಿಐ ಎಟಿಎಂ ಕೊರೆದು ಲಕ್ಷಾಂತರ ರೂ. ಹಣ ದೋಚಿ ಕಳ್ಳರು ಪರಾರಿಯಾಗಿರುವಂತಹ ಘಟನೆ ಪಟ್ಟಣದ ಅಂಬೇಡ್ಕರ್ ನಗರ ಬಳಿ ತಡರಾತ್ರಿ ನಡೆದಿದೆ.
ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಎಸ್‌ಬಿಐ ಎಟಿಂನಲ್ಲಿದ್ದ ಅಂದಾಜು 20 ಲಕ್ಷಕ್ಕೂ ಅಧಿಕ ಹಣ ದೋಚಿ ಪರಾರಿಯಾಗಿದ್ದಾರೆ. ಚಿಕ್ಕೋಡಿ ಪಟ್ಟಣದ ಅಂಬೇಡ್ಕರ್ ನಗರದ ಬಳಿಯಿರುವ ಎಸ್‌ಬಿಐ ಎಟಿಎಂ ಗೆ ಮಧ್ಯರಾತ್ರಿ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಎಸ್‌ಬಿಐ ಎಟಿಂನಲ್ಲಿದ್ದ ಅಂದಾಜು 20 ಲಕ್ಷಕ್ಕೂ ಅಧಿಕ ಹಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಎಟಿಎಂನಲ್ಲಿ ಒಟ್ಟು ಎಷ್ಟು ಹಣ ಇತ್ತು ಎಂಬ ಬಗ್ಗೆ ಬ್ಯಾಂಕ್ ಸಿಬ್ಬಂದಿ ಮತ್ತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!