Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ರಾಜ್ಯ

ಎಫ್‌ಡಿಎ ಪರೀಕ್ಷೆ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಅರೆಸ್ಟ್ 

ಬೆಂಗಳೂರು: ಇಷ್ಟು ದಿನಗಳಿಂದ ತಲೆ ಮರೆಸಿಕೊಂಡಿದ್ದ ಎಫ್‌ಡಿಎ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಅವರನ್ನು ಪೊಲೀಸ್ರು ಕೊನೆಗೂ ಅರೆಸ್ಟ್ ಮಾಡಿದ್ದಾರೆ.
ಪರೀಕ್ಷಾ ಕಳ್ಳಾಟದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಮಹಾರಾಷ್ಟ್ರದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರ್‌ಡಿ ಪಾಟೀಲ್‌ನನ್ನು ಕಲಬುರಗಿಗೆ ಪೊಲೀಸರು ಕರೆ ತರುತ್ತಿದ್ದಾರೆ. ಪಾಟೀಲ್‌ಗೆ ರಕ್ಷಣೆ ನೀಡಿದ್ದ ವ್ಯಕ್ತಿಗಳ ಅರೆಸ್ಟ್..!
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯ ಪ್ರಮುಖ ಆರೋಪಿ ಆರ್.ಡಿ ಪಾಟೀಲ್. ಈತನಿಗಾಗಿ ಪೊಲೀಸರು ಹಲವು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರು. ಈತನಿಗೆ ಫ್ಲಾಟ್ ಮಾಲೀಕ ಮತ್ತು ಮ್ಯಾನೇಜರ್ ಓರ್ವ ರಕ್ಷಣೆ ನೀಡಿದ್ದರು ಎನ್ನಲಾಗಿತ್ತು. ಇವರಿಬ್ಬರನ್ನು ಸಹ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಬೆನ್ನಲ್ಲೇ ಮಹಾರಾಷ್ಟ್ರಕ್ಕೆ ತೆರಳಿ ಪೊಲೀಸ್ರು ಪಾಟೀಲ್‌ನನ್ನು ಬಂಧಿಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!