ಬೆಳಗಾವಿ

ಮೇ ನಂತರ ಕಾಂಗ್ರೆಸ್ ಸರ್ಕಾರ ಪತನ ಎಚ್.ಡಿ.ಕೆ..? 

ಸಚಿವರೊಬ್ಬರು 50 ಮಂದಿ ಶಾಸಕರೊಂದಿಗೆ ಕಾಂಗ್ರೆಸ್ ತೊರೆಯಲಿದ್ದಾರೆ: ಎಚ್.ಡಿ.ಕುಮಾರಸ್ವಾಮಿ
ಬೆಳಗಾವಿ: ಮೇ ನಂತರ ಕಾಂಗ್ರೆಸ ಸರ್ಕಾರ ಪತನವಾಗಲಿದೆ. ಪ್ರಭಾವಿ ಸಚಿವರೊಬ್ಬರು 50 ಮಂದಿ ಶಾಸಕರೊಂದಿಗೆ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಮುಂಚೂಣಿ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಸಚಿವರೊಬ್ಬರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಬ್ರಹ್ಮಾಸ್ತ್ರವಾಗಿ ಬಳಕೆಯಾಗುತ್ತಿದ್ದಾರೆ. ಇದಕ್ಕೆ ತಕ್ಕ ಹಾಗೆ ಡಿ.ಕೆ.ಶಿವಕುಮಾರ ಬೆಳಗಾವಿ ರಾಜಕಾರಣದಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ.
ಪ್ರಭಾವಿ ಸಚಿವರೊಬ್ಬರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ತಮಗೆ ಇಷ್ಟವಿಲ್ಲ. ಒಂದು ವೇಳೆ ಆ ರೀತಿ ಆದರೆ ಅನಂತರದ ರಾಜಕೀಯ ಬೆಳವಣಿಗೆಗೆ ನಾವು ಹೊಣೆ ಅಲ್ಲ ಎಂದು ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.ಇದನ್ನು ಆಧಾರವಾಗಿಟ್ಟುಕೊಂಡೇ ಎಚ್.ಡಿ.ಕುಮಾರಸ್ವಾಮಿ ಮೇ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಾಂಬ್ ಸಿಡಿಸಿದ್ದಾರೆ. 
ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ನಲ್ಲಿ ಅಕಾರ ಹಂಚಿಕೆಯ ಪರ್ವ ನಡೆಯಲಿದೆ. ಅಂತಹ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಬಣದ ಪ್ರಭಾವಿ ಸಚಿವರು 50 ಮಂದಿ ಶಾಸಕರೊಂದಿಗೆ ಹೊರಬರಲಿದ್ದು, ಕಾಂಗ್ರೆಸ ಸರ್ಕಾರ ಪತನಕ್ಕೆ ಕಾರಣವಾಗಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ.
TV24 News Desk
the authorTV24 News Desk

Leave a Reply