Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
Uncategorizedರಾಜ್ಯ

ಹುಸಿ ಬಾಂಬ್ ಬೆದರಿಕೆ ಕರೆ ಆರೋಪಿ ಅರೆಸ್ಟ್ ..!

ಬೆಂಗಳೂರು: ವಿಧಾನಸೌಧದ ಸಮೀಪವೇ ಇರುವ ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ ಸಹಾಯವಾಣಿಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಯನ್ನು ಭಾಸ್ಕರ್ ಎಂದು ಗುರ್ತಿಸಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ನಿವಾಸಿಯಾಗಿದ್ದಾನೆ.  ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಬಂದಿದ್ದು ಹಾಗೂ ಪೊಲೀಸರು ತೀವ್ರ ತನಿಖೆ ನಡೆಸುತ್ತಿರುವ ಸುದ್ದಿ ತಿಳಿದಿದ್ದ ಈತ, ಸೋಮವಾರ ಬೆಂಗಳೂರಿಗೆ ಬಂದಿದ್ದ. ಈ ವೇಳೆ ಬೆಂಗಳೂರು ಪೊಲೀಸರನ್ನು ಆಟವಾಡಿಸಬೇಕೆಂದು ನಿರ್ಧರಿಸಿ ಬೆದರಿಕೆ ಕರೆ ಮಾಡಿದ್ದಾನೆಂದು ತಿಳಿದುಬಂದಿದೆ.
ಪೊಲೀಸರ ಆಟವಾಡಿಸಲು ಗೂಗಲ್ ನಲ್ಲಿ ಸರ್ಚ್ ಮಾಡಿ ಎನ್ಐಎ ನಂಬರ್ ಪಡೆದುಕೊಂಡಿದ್ದಾನೆ. ನಂತರ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದಾರೆ. ಬೆದರಿಕೆ ಕರೆಯಿಂದ ಗಾಬರಿಯಾದ ಎನ್ಐಎ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಆರೋಪಿ ಬೆಂಗಳೂರಿನಿಂದ ನೇರವಾಗಿ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದಾನೆ. ಬಾಂಬ್ ಬೆದರಿಕೆ ಕರೆ ಬಂದಿದ್ದ ಫೋನ್ ನಂಬರ್’ನ ನೆಟ್ವರ್ಕ್ ಟ್ರ್ಯಾಕ್ ಮಾಡುತ್ತಿದ್ದ ಪೊಲೀಸರು, ಆರೋಪಿ ಭಾಸ್ಕರ್ ನನ್ನು ಬಂಧನಕ್ಕೊಳಪಡಿಸಿದ್ದಾರೆ. ಈ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!