Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ರಾಜ್ಯ

KSRTC ಬಸಗಳಲ್ಲಿ ಮಾಸ್ಕ ಕಡ್ಡಾಯ..! 

ಬೆಂಗಳೂರು: ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಹಾಗೂ ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್‌ ಸಭೆ ನಡೆದಿದೆ. ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ. ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿಯಲ್ಲಿ (BMTC) ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.
TV24 News Desk
the authorTV24 News Desk

Leave a Reply

error: Content is protected !!