Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ಸಂಸದರ ಅಮಾನತು ಖಂಡಿಸಿ ಕೈ ಪ್ರತಿಭಟನೆ..! 

ಬೆಳಗಾವಿ: ಉಭಯ ಸದನಗಳ 142 ಸಂಸದರ ಅಮಾನತು, ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ
ನಡೆಸಿದರು.
ಇದಕ್ಕೂ ಮೊದಲು ಚನ್ನಮ್ಮ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ನಂತರ ಚನ್ನಮ್ಮ ವೃತ್ತದಿಂದ ಕಾಂಗ್ರೆಸ್ ಭವನದ ವರೆಗೆ ಪಾದಯಾತ್ರೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮಾತನಾಡಿ, ದೇಶದ ಪ್ರಜಾಪ್ರಭುತ್ವವನ್ನು ಪ್ರಧಾನಿ ಮೋದಿ ಆಡಳಿತ ದಿನನಿತ್ಯ ಕಗ್ಗೋಲೆ ಮಾಡುತ್ತಿದೆ. ದೇಶದ ಸಂಸತ್ ಭವನದೊಳಗೆ ಬಿಜೆಪಿ ಬೆಂಬಲಿತ ದುಷ್ಕರ್ಮಿಗಳು ಒಳ ನುಗ್ಗಿದ ಘಟನೆ ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದರೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

TV24 News Desk
the authorTV24 News Desk

Leave a Reply

error: Content is protected !!