ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ರಾಹುಲ್ ಶಿಂಧೆ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಮೊದಲು ಜಿಲ್ಲಾ ಪಂಚಾಯಿತಿಗೆ ಸಿಇಒ ಆಗಿದ್ದ ಹರ್ಷಲ್ ಬೋಯರ್ ಕಾರ್ಯನಿರ್ವಹಿಸುತ್ತಿದ್ದು ಅವರು ವರ್ಗಾವಣೆಗೊಂಡಿದ್ದಾರೆ.
2016 ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಹರ್ಷಲ್ ಬೋಯರ್ ಬೆಳಗಾವಿ ಜಿಪಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರನ್ನು ಇದೀಗ ರಾಜ್ಯ ಸರಕಾರ ಬೆಂಗಳೂರಿನ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾಯಿಸಿದೆ.








