ಅವರಾದಿ ಗ್ರಾಮ ಪಂಚಾಯತಿಯಲ್ಲಿ ಲಕ್ಷಾಂತರ ಅವ್ಯವಹಾರಆರೋಪ ತನಿಖೆಗೆ ಮನವಿ..!!
ಬೆಳಗಾವಿ: ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಅವರಾದಿ ಗ್ರಾಮ ಪಂಚಾಯತಿಯಲ್ಲಿ 2021ರಿಂದ 23ನೇ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿರುವ ಶಂಕೆ ಇದ್ದು ಕಾರಣ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಭ್ರಷ್ಟಾಚಾರ ಸಾಬೀತಾಗಿದ್ದಲ್ಲಿ ಸಂಬಂದಪಟ್ಟ ಅಧಿಕಾರಿಗಳನ್ನ ಸೇವೆಯಿಂದ ವಜಾಗೊಳಿಸಬೇಕೆಂದು ಸಾಮಾಜಿಕ ಹೋರಾಟಗಾರ ಪ್ರಸನ್ನ ಅವರು ಕರ್ನಾಟಕ ಲೋಕಾಯುಕ್ತ ಸೇರಿದಂತೆ ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿ, ಓಂಬಡ್ಸಮನ್ ಗೆ ಲಿಖಿತ ದೂರು ನೀಡಿದ್ದಾರೆ.
ಇತ್ತೀಚೆಗೆ ಗ್ರಾಮ ಪಂಚಾಯತಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಕಳೆದ ಕೆಲ ದಿನಗಳ ಹಿಂದಷ್ಟೇ ರಾಯಚೂರು ಜಿಲ್ಲೆಯ ಇಪ್ಪತ್ತಕ್ಕೂ ಹೆಚ್ಚು ಪಿಡಿಓಗಳನ್ನ ಅಮಾನತ್ತು ಮಾಡಲಾಗಿದೆ ಅದರಂತೆ ಕಿತ್ತೂರು ತಾಲ್ಲೂಕಿನ ಅವರಾದಿ ಗ್ರಾಮ ಪಂಚಾಯತಿಯಲ್ಲಿ ಕೂಡ ಸಾಕಷ್ಟು ಪ್ರಮಾಣದಲ್ಲಿ ಕಾಮಗಾರಿಗಳ ಹೆಸರಲ್ಲಿ ನಕಲಿ ಬಿಲ್ ತೆಗೆದು ಭ್ರಷ್ಟಾಚಾರವಾಗಿರುವದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಕೂಡಲೇ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
tv24plus.in > Blog > ಜಿಲ್ಲೆ > ಬೆಳಗಾವಿ > ಅವರಾದಿ ಗ್ರಾಮ ಪಂಚಾಯತಿಯಲ್ಲಿ ಲಕ್ಷಾಂತರ ಅವ್ಯವಹಾರ..!
the authorTV24 News Desk
All posts byTV24 News Desk
Leave a reply









