ರಾಜ್ಯ

ರಾಜ್ಯಾದ್ಯಂತ ಹುಕ್ಕಾ ಬಳಕೆ ನಿಷೇದ..! 

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮತ್ತು ತಂಬಾಕು ರಹಿತ ಹುಕ್ಕಾ ಬಳಕೆಯನ್ನು ನಿಷೇಧಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಕಳವಳ ವ್ಯಕ್ತಪಡಿಸುತ್ತಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಂಬಾಕು ರಹಿತ ಎಂದು ಹೇಳಿಕೊಂಡು ನಡೆಯುತ್ತಿದ್ದ ಅನಾರೋಗ್ಯಕರ ಹುಕ್ಕಾ ಹಾವಳಿಗೆ ಕಡಿವಾಣ ಹಾಕಿದ್ದಾರೆ.
ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು ಸಂಬಂಧಿತ ರೋಗಗಳ ಹೆಚ್ಚಳವನ್ನು ತಡೆಯುವ ನಿಟ್ಟಿನಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆಯನ್ನು ನಿಷೇಸಿರುವುದಾಗಿ ಆರೋಗ್ಯ ಇಲಾಖೆ ಆದೇಶದಲ್ಲಿ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿರುವ ಗ್ಲೋಬಲ್ ಅಡಲ್ಸ್ ಟೊಬ್ಯಾಕೊ ಸರ್ವೇ 2016-17, ಅಧ್ಯ ಯನದ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ ಶೇ.8.8ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ ಶೇ.23.9ರಷ್ಟು ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಾಗಿ ಧೂಮಪಾನ ಮಾಡುತ್ತಾರೆ.
ಯುವ ಜನತೆಯು ಇತ್ತೀಚಿನ ವರ್ಷಗಳಲ್ಲಿ ತಂಬಾಕು ಉತ್ಪನ್ನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. 13 ರಿಂದ15 ವರ್ಷ ವಯಸ್ಸಿನ ಸುಮಾರು ಐದನೇ ಒಂದು ಭಾಗದಷ್ಟು ವಿದ್ಯಾರ್ಥಿಗಳು ಹಲವು ಬಗೆಯ ತಂಬಾಕು ಸೇವಿಸುತ್ತಿದ್ದಾರೆ. ತಂಬಾಕು ಒಳಗೊಂಡ ಶಿಶಾ ಮತ್ತು ಹರ್ಬಲ್ ಶಿಶಾ ಇವೆಲ್ಲವೂ ವಿಷಕಾರಿ ಹೊಗೆಯನ್ನು ಹೊರಸೂಸುವುದರಿಂದ ಕ್ಯಾನ್ಸರ್, ಹೃದ್ರೋಗ ಹಾಗೂ ಶ್ವಾಸಕೋಶದ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂಬ ಮಹತ್ವದ ಅಂಶ ಸಂಶೋಧನೆಯಿಂದ ತಿಳಿದುಬಂದಿದೆ.
TV24 News Desk
the authorTV24 News Desk

Leave a Reply