ಬೆಳಗಾವಿರಾಜ್ಯ

ಗೊಂದಲದ ನಡುವೆ ಟಿಕೆಟ್ ಗಿಟ್ಟಿಸಿಕೊಂಡ ಶೆಟ್ಟರ್ ..!

ಕಾಗೇರಿ ಇನ್ ಅನಂತ್ ಕುಮಾರ್ ಹೆಗಡೆ ಔಟ್..!
ಯಾರಿಗೆಲ್ಲ ಟಿಕೆಟ್:
ಬೆಳಗಾವಿ ಲೋಕಸಭಾ ಕ್ಷೇತ್ರ-ಜಗದೀಶ್ ಶೆಟ್ಟರ್
ರಾಯಚೂರು ಲೋಕಸಭಾ ಕ್ಷೇತ್ರ-ರಾಜಾ ಅಮರೇಶ್ವರ ನಾಯಕ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ-ಡಾ.ಕೆ.ಸುಧಾಕರ್
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ವಿಶ್ವೇಶ್ವರ ಹೆಗಡೆ ಕಾಗೇರಿ

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್ ಇದ್ದಂತೆ ಕಾಣುತ್ತಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್ಗಾಗಿ ಫೈಟ್ ನಡೆಯುತ್ತಿದೆ.

TV24 News Desk
the authorTV24 News Desk

Leave a Reply