ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಂದ ಬೆಳಗಾವಿಗೆ ಕೊಡುಗೆ ಏನು? ಅವರು ಬೆಳಗಾವಿ ನನ್ನ ಕರ್ಮ ಭೂಮಿ ಎನ್ನುತ್ತಿದ್ದಾರೆ. ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಶ್ನೆ ಮಾಡಿದ್ದಾರೆ.
ಗೋಕಾಕ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿಜನ್ ಘಟಕ ಅನ್ನು ಹುಬ್ಬಳ್ಳಿ- ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದರು. ಬೆಳಗಾವಿ ಜನರಿಗೆ ಅನ್ಯಾಯ ಮಾಡಿರುವ ಅವರು, ಇಂದು ಇದು ನನ್ನ ಕರ್ಮ ಭೂಮಿ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆರು ಬಾರಿ ಹುಬ್ಬಳ್ಳಿ ಜನರು ಜಗದೀಶ್ ಶೆಟ್ಟರ್ ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ವಿರೋಧ ಪಕ್ಷದ ನಾಯಕರಾದರು, ಮಂತ್ರಿಯಾದರು, ಮುಖ್ಯಮಂತ್ರಿಯಾದರು, ಬಿಜೆಪಿ ಅಧ್ಯಕ್ಷರಾದರು. ಎಲ್ಲವನ್ನೂ ಅನುಭವಿಸಿದ್ದಂತವರನ್ನು ಹುಬ್ಬಳ್ಳಿ- ಧಾರವಾಡ ಜನರು ಈಗ ಹೊರಗೆ ಹಾಕಿದ್ದಾರೆ.
ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಕರ್ಮ ಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಎಂದು ಹೆಬ್ಬಾಳಕರ್ ಕಿಡಿ ಕಾರಿದರು.
tv24plus.in > Blog > ಜಿಲ್ಲೆ > ಬೆಳಗಾವಿ > ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಹೆಬ್ಬಾಳ್ಕರ
the authorTV24 News Desk
All posts byTV24 News Desk
Leave a reply









