ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್, ಭಾಗ್ಯ, ನಾಗೇಶ್, ವಿಶಾಲಾಕ್ಷಿ, ಅರ್ಪಿತಾ, ಸುಭದ್ರಾ ಬಾಯಿ, ಪುಣ್ಯ, ಮಂಜುಳಾ ಬಾಯಿ, ಆದರ್ಶ ಮಾನಸ, ರೂಪ, ಮಂಜುಳಾ ಮೃತಪಟ್ಟವರು. ಮೃತರು ಶಿವಮೊಗ್ಗ ಮೂಲದ ನಿವಾಸಿಗಳು ಎನ್ನಲಾಗಿದೆ. ಓರ್ವ ಬಾಲಕಿ ಮತ್ತು ಅಜ್ಜಿಗೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.
ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಅಂಶಿಕುಮಾರ್ ಮಾಹಿತಿ ನೀಡಿದ್ದಾರೆ.
tv24plus.in > Blog > ಜಿಲ್ಲೆ > ಹಾವೇರಿ > ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ:13 ಜನ ಸಾವು
the authorTV24 News Desk
All posts byTV24 News Desk
Leave a reply
You Might Also Like
ಹಾವೇರಿ ಗ್ಯಾಂಗ್ ರೇಪ್ ಸಿಪಿಐ ಅಮಾನತು..!
TV24 News DeskJanuary 17, 2024
ಹಾವೇರಿ ನೈತಿಕ ಪೊಲೀಸಗಿರಿಗೆ ಬಿಗ್ ಟ್ವಿಸ್ಟ್ ..!
TV24 News DeskJanuary 12, 2024