ಬೆಳಗಾವಿ:ಗೋವಾ ರಾಜ್ಯದಿಂದ ಬೆಳಗಾವಿಗೆ ಬರುತ್ತಿದ್ದ ರಾಜಸ್ತಾನ ಮೂಲದ ಕಾರು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಳಗಾವಿ ಸಮೀಪದ ಚೋರ್ಲಾ ಘಾಟನ ಬಳಿ ನಡೆದಿದೆ. ಗೋವಾ ರಾಜ್ಯದಿಂದ ಬೆಳಗಾವಿಗೆ ಬರುತ್ತಿದ್ದ ರಾಜಸ್ತಾನ ಮೂಲದ ಕಾರಿನಲ್ಲಿ ತಾಂತ್ರಿಕ ದೋಷದಿಂದ ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಕಾರು ಧಗಧಗನೇ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿ ಇದ್ದವರು ಕಾರಿನಿಂದ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ಪ್ರಾಣ ಹಾನಿ ಆಗಲ್ಲ.ಕೇರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
tv24plus.in > Blog > ಜಿಲ್ಲೆ > ಬೆಳಗಾವಿ > ಚೋರ್ಲಾ ಘಾಟನಲ್ಲಿ ಹೊತ್ತಿ ಉರಿದ ಕಾರು