ಚಿಕ್ಕೋಡಿ ನಗರದಲ್ಲಿ ತಾಲೂಕಾ ಆಡಳಿತ ವತಿಯಿಂದ ೬೭ ನೇ ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಆಯೋಜಿಸಿದ್ದ ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿ ಭಾವಚಿತ್ರ ಹಾಗೂ ನಾಡಿನ ವಿವಿಧ ಸ್ತಬ್ಧಚಿತ್ರಗಳ ಮೆರವಣಿಗೆಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಉಪವಿಭಾಗಾಧಿಕಾರಿಗಳು, ಪುರಸಭೆ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು,ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು