ಲಾಹೋರ್, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಮ್ರಾನ್ ಮತ್ತು ಆಪ್ತ ಸಹಾಯಕ ಗಾಯಗೊಂಡಿದ್ದಾರೆ.ಭಾರತವನ್ನು ಹೊಗಳಿ ಈಗಿನ ಸರ್ಕಾರವನ್ನು ಟೀಕಿಸುತ್ತಿದ್ದ ಇಮ್ರಾನ್ ಖಾನ್ ಚುನಾವಣೆಯ ಸಿದ್ದತೆಗಾಗಿ ಲಾಹೋರ್ ನ ವಜೀರಾ ಬಾದ್ ನಲ್ಲಿ ತೆರೆದ ವಾಹನದಲ್ಲಿ ಪ್ರಚಾರ ನಡೆಸುತ್ತಿದ್ದರು.ಈ ವೇಳೆ ದುಷ್ಕರ್ಮಿ ಗುಂಡಿನ ದಾಳಿ ನಡೆಸಿದ್ದಾನೆ.
ಇಮ್ರಾನ್ ಅವರ ಬಲಗಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ.ಕೂಡಲೇ ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ.ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದಾಳಿ ನಡೆದ ನಂತರ ಇಮ್ರಾನ್ ಅವರಿಗೆ ಪೊಲೀಸರು ಗುಂಡು ನಿರೋಧಕ ಜಾಕೆಟ್ ತೊಡಿಸಿ ಇನ್ನೊಂದು ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ದೃಶ್ಯಗಳನ್ನು ಸ್ಥಳೀಯ ಮಾಧ್ಯಮಗಳು ಬಿತ್ತರಿಸಿವೆ.ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.