Uncategorized

ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ : ಜಾರಕಿಹೊಳಿ

ಮೂಡಲಗಿ : ಸಾರ್ವಜನಿಕರ ಸುಗಮ ಸಂಚಾರಕ್ಕೆ ತುಕ್ಕಾನಟ್ಟಿ ನಿಂದ ಕಲ್ಲೋಳಿ ವರೆಗಿನ ರಸ್ತೆ ಸುಧಾರಣೆ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದರು. ಗುರುವಾರದಂದು ಲೋಕೋಪಯೋಗಿ ಇಲಾಖೆಯಿಂದ 9.60 ಕೋಟಿ ರೂ. ವೆಚ್ಚದ ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಅಭಿವೃದ್ಧಿಯಿಂದ ಕಲ್ಲೋಳಿಯಿಂದ ಸಂಚರಿಸುವ ತುಕ್ಕಾನಟ್ಟಿ ಮತ್ತು ರಾಯಬಾಗ ತಾಲೂಕಿನ ಗ್ರಾಮಗಳಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದರು. ರಸ್ತೆಗಳ ಅಭಿವೃದ್ಧಿಗಾಗಿ ಕ್ಷೇತ್ರದಲ್ಲಿ ಈಗಾಗಲೇ ವಿವಿಧ ರಸ್ತೆ ಕಾಮಗಾರಿಗಳನ್ನು ತೆಗೆದುಕೊಂಡಿದ್ದೇವೆ. ಇದೇ ಡಿಸೆಂಬರ್ ಅಂತ್ಯದೊಳಗೆ ಬಹುತೇಕ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಕಲ್ಲೋಳಿಯಿಂದ ತುಕ್ಕಾನಟ್ಟಿವರೆಗಿನ 6.50 ಕಿ.ಮೀ ರಸ್ತೆ ಸಹ ಸುಧಾರಣೆಯಾಗಲಿದೆ. ಸಾರ್ವಜನಿಕರು ಸಹ ರಸ್ತೆ ಕಾಮಗಾರಿಗೆ ಸಹಕರಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ತುಕ್ಕಾನಟ್ಟಿ ಗ್ರಾಪಂ ಅಧ್ಯಕ್ಷ ಪುಂಡಲೀಕ ಬಾಗೇವಾಡಿ, ಉಪಾಧ್ಯಕ್ಷ ಯಲ್ಲವ್ವ ಬಿಳಿ ಗೌಡ್ರು, ರತ್ನವ್ವ ನಾವಿ,  ಅಭಿವೃದ್ಧಿ ಅಧಿಕಾರಿ ವೀರಭದ್ರ ಗುಂಡಿ  , ಸಿದ್ದಪ್ಪ ಹಮ್ಮನ್ನವರ, ಶಿವಪ್ಪ ಮರ್ದಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಮತ್ತು ತುಕ್ಕಾನಟ್ಟಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

 

TV24 News Desk
the authorTV24 News Desk

Leave a Reply

error: Content is protected !!