ಕ್ರೀಡೆ

ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಆಸ್ಟ್ರೇಲಿಯ

ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಅ ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ತಂಡದ ವಿರುದ್ದ 4 ವಿಕೆಟ್‌ ಜಯ ಸಾಧಿಸಿದ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ಸೆಮಿಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಮತ್ತೊಮ್ಮೆ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶನ ತೋರಿದ ಬೆನ್ ಸ್ಟೋಕ್ಸ್‌, ಇಂಗ್ಲೆಂಡ್ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಸಮಯೋಚಿತ ಬ್ಯಾಟಿಂಗ್ ನಡೆಸಿದ ಬೆನ್ ಸ್ಟೋಕ್ಸ್‌  ಅಜೇಯ 44 ರನ್ ಬಾರಿಸಿ ಗೆಲುವಿನ ರೂವಾರಿ ಎನಿಸಿದರು. ಈ ಗೆಲುವಿನೊಂದಿಗೆ  ದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್‌ಗೆ ಕಾಲಿಡುವಲ್ಲಿ ಯಶಸ್ವಿಯಾಗಿವೆ. ಇಂಗ್ಲೆಂಡ್ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾದ ಸೆಮೀಸ್ ಕನಸು ನುಚ್ಚುನೂರಾಗಿದೆ.

TV24 News Desk
the authorTV24 News Desk

Leave a Reply