ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಅಮೋಘ ಗೆಲುವು ದಾಖಲಿಸಿದೆ. ಈ ಮ್ಯಾಚ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ 20 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 135 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 86 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟರ್ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಬಾಂಗ್ಲಾ ಬೌಲರ್ಗಳ ಬೆಂಡೆತ್ತಿದ್ದರು. ಈ ಬೆಂಡೆತ್ತುವಿಕೆಯೊಂದಿಗೆ ನಿತೀಶ್ ರೆಡ್ಡಿ ಹೊಸ ದಾಖಲೆಯನ್ನು ಸಹ ಬರೆದಿದ್ದಾರೆ.
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರೆಡ್ಡಿ 34 ಎಸೆತಗಳಲ್ಲಿ 74 ರನ್ ಚಚ್ಚಿದ್ದರು. ಈ ವೇಳೆ ಅವರ ಬ್ಯಾಟ್ನಿಂದ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳು ಮೂಡಿಬಂದಿದ್ದವು. ಈ ಮೂಲಕ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 221 ರನ್ಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಟೀಮ್ ಇಂಡಿಯಾದ ಯಾವುದೇ ಆಟಗಾರ 70+ ರನ್ ಬಾರಿಸಿ, 2 ವಿಕೆಟ್ ಕಬಳಿಸಿಲ್ಲ. ಇದೀಗ ಆಡಿದ 2ನೇ ಪಂದ್ಯದ ಮೂಲಕವೇ ನಿತೀಶ್ ಕುಮಾರ್ ರೆಡ್ಡಿ ಯಾರಿಂದಲೂ ಸಾಧ್ಯವಾಗದಿದ್ದ ದಾಖಲೆಯನ್ನು ನಿರ್ಮಿಸಿ ತೋರಿಸಿದ್ದಾರೆ. ಅಲ್ಲದೆ ಆಲ್ರೌಂಡರ್ ಆಟದೊಂದಿಗೆ ಭಾರತ ತಂಡಕ್ಕೆ ಹೊಸ ಭರವಸೆಯನ್ನು ಮೂಡಿಸಿದ್ದಾರೆ.