cinemaಕ್ರೈಂ

ದಾಸನಿಗೆ ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್;

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಅವರ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ನಲ್ಲಿ ನಡೆಯಿತು. 120ಕ್ಕೂ ಅಧಿಕ ದಿನಗಳ ಕಾಲ ಜೈಲಿನಲ್ಲಿದ್ದ ದರ್ಶನ್​ ಇಂದು (ಅ.14) ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ನ್ಯಾಯಾಲಯವು ಬೇಲ್​ ನಿರಾಕರಿಸಿದೆ. ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್​ಗೆ ಜಾಮೀನು ಸಿಗದ ಕಾರಣ ಆಪ್ತರಿಗೆ ನಿರಾಸೆ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಚಾರ್ಜ್​ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅವರು ಜಾಮೀನಿಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಲೇ ಬಂದಿದ್ದರು. ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ ಜಾಮೀನು ಕೊಡಲು ನಿರಾಕರಿಸಿದೆ. ಇದರಿಂದ ದರ್ಶನ್ ಜೈಲಿನಲ್ಲೇ ಮುಂದುವರಿಯುವುದು ಅನಿವಾರ್ಯ ಆಗಿದೆ. ಅವರು ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅವರು ಜೂನ್ 11ರಂದು ಅರೆಸ್ಟ್ ಆದರು. ಆ ಬಳಿಕ ಅವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿತ್ತು. ಆದರೆ, ಅಲ್ಲಿ ಅವರು ಐಷಾರಾಮಿ ವ್ಯವಸ್ಥೆ ಪಡೆದ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಈಗ ಈ ತೀರ್ಪಿನಿಂದ ಅವರು ಬಳ್ಳಾರಿ ಜೈಲಲ್ಲೇ ಇರಬೇಕಾಗಿದೆ.

ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ ದರ್ಶನ್ ಬೆಂಗಳೂರಿಗೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಈಗಾಗಲೇ ದರ್ಶನ್ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಲು ಪ್ಲ್ಯಾನ್​ ನಡೆದಿದೆ. ದರ್ಶನ್ ಕಳೆದ ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ನಡೆಯಲು ಕೂಡ ಅವರಿಗೆ ಕಷ್ಟ ಆಗುತ್ತಿದೆ ಎನ್ನಲಾಗಿದೆ.

TV24 News Desk
the authorTV24 News Desk

Leave a Reply