ಕ್ರೀಡೆ

IND vs NZ: ಟೀಮ್ ಇಂಡಿಯಾಗೆ ಆಘಾತ: ಮೊದಲ ಪಂದ್ಯಕ್ಕೆ ಯುವ ದಾಂಡಿಗ ಅನುಮಾನ

ಇಂಡೊ-ಕಿವೀಸ್ ಟೆಸ್ಟ್ ಸರಣಿ ಇಂದಿನಿಂದ (ಅ.16) ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಭಾರತ ತಂಡದ ಯುವ ಬ್ಯಾಟರ್​ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಸರ್ಫರಾಝ್ ಖಾನ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ. ಕತ್ತು ಮತ್ತು ಭುಜದ ನೋವಿನಿಂದ ಬಳಲುತ್ತಿರುವ ಗಿಲ್ ಬೆಂಗಳೂರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಗಿಲ್ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಶತಕ ಬಾರಿಸಿ ಮಿಂಚಿದ್ದರು. ಇದೀಗ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ಟೀಮ್ ಮ್ಯಾನೇಜ್ಮೆಂಟ್ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ಶುಭ್​ಮನ್ ಗಿಲ್ ಹೊರಗುಳಿದರೆ ಅವರ ಸ್ಥಾನದಲ್ಲಿ ಯುವ ದಾಂಡಿಗ ಸರ್ಫರಾಝ್ ಖಾನ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇರಾನಿ ಕಪ್ ಪಂದ್ಯದಲ್ಲಿ ಮುಂಬೈ ಪರ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿರುವ ಸರ್ಫರಾಝ್ ಉತ್ತಮ ಫಾರ್ಮ್​ನಲ್ಲಿದ್ದು, ಹೀಗಾಗಿ ಗಿಲ್ ಬದಲಿಗೆ ಅವರಿಗೆ ಚಾನ್ಸ್ ಸಿಗಬಹುದು.

TV24 News Desk
the authorTV24 News Desk

Leave a Reply