ಬೆಳಗಾವಿ

 ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಂಸದ ಅಣ್ಣಾಸಾಹೇಬ ಜೊಲ್ಲೆ

ಹಂಚಿನಾಳ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ನಿಪ್ಪಾಣಿ ಮತಕ್ಷೇತ್ರದ ಹಂಚಿನಾಳ ಗ್ರಾಮದಿಂದ ಮಹಾರಾಷ್ಟ್ರ ಗಡಿಯವರೆಗೆ (ಜನವಾಡೆ ಪಾನಂದ ರಸ್ತೆಯವರೆಗೆ) ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಮಂಜೂರಾದ 1 ಕೋಟಿ ರೂ. ಮೊತ್ತದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ ಯವರು ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದರು. ಜನರ ಬೇಡಿಕೆಗೆ ಸ್ಪಂದಿಸಿ ರಸ್ತೆಗಳನ್ನು ಅಭಿವೃದ್ಧಿ ಮಾಡುತ್ತಿದ್ದು, ಶೀಘ್ರದಲ್ಲಿಯೇ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
TV24 News Desk
the authorTV24 News Desk

Leave a Reply