Uncategorized

ಮೂರು ಸಾವಿರ ಮಹಿಳೆಯರಿಗೆ ನಾಳೆ ಸರ್ಕಾರದಿಂದ ಸೀಮಂತ ಕಾರ್ಯಕ್ರಮ: ಸಚಿವೆ ಹೆಬ್ಬಾಳಕರ್

ಬೆಳಗಾವಿ:

ರಾಜ್ಯದಲ್ಲಿಯೇ ಮೊದಲ ಬಾರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ತಮ್ಮ‌ ಗೃಹ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಅವರು ನಾಳೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ 3000 ‌ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ‌ಮಾಡಲಾಗುತ್ತಿದೆ ಎಂದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಈ ಕಾರ್ಯಕ್ರಮ ಮಾಡಲಾಗುತ್ತಿದ್ದು ಈ ಕಾರ್ಯಕ್ರಮವನ್ನು ಸರ್ಕಾರದಿಂದಲೇ ಆಯೋಜನೆ ಮಾಡಲಾಗುತ್ತಿದೆ ಎಂದರು. ಇನ್ನು ‌ಹಿರಿಯ ನಾಗಕರೀಕರ ದಿನಾಚರಣೆಯ ಅಂಗವಾಡಿ ವಿವಿಧ ಆಟಗಳಲ್ಲಿ ಗೆದ್ದ ಹಿರಿಯರಿಗೆ ಬಹುಮಾನ ವಿತರಣಾ ಸಮಾರಂಭ ಆಯೋಜನೆ ಮಾಡಲಾಗಿದ್ದು ವಿಶ್ವ ಅಂಗವಿಕಲರ ದಿನಾಚರಣೆಯ ಪ್ರಯುಕ್ತ 100 ಜನ ವಿಕಲಚೇತನರಿಗೆ ದ್ವಿಚಕ್ರ ವಾಹನ ನೀಡುವ ಕೆಲಸವೂ ಅಲ್ಲಿಯೇ ಆಗುತ್ತದೆ ಎಂದರು. ಅಲ್ಲದೇ ಅಂಧ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ.ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿಯನ್ನೂ ಸಹ ಕೊಡಲಾಗುತ್ತಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡರು.

TV24 News Desk
the authorTV24 News Desk

Leave a Reply