ಬೆಳಗಾವಿ;
ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ ಬೆಳಗಾವಿ ನಗರ ಹಾಗೂ ಬೆಳಗಾವಿ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಖಾನಾಪೂರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದು ನಾಳೆ ಅಂದರೆ 25/06/2025 ರಂದು ಒಂದು ದಿನ ರಜೆ ನೀಡಲಾಗಿದೆ. ಬೆಳಗಾವಿನಗರ ಹಾಗೂ ಗ್ರಾಮೀಣ ಮತ್ತು ಖಾನಾಪುರ ತಾಲೂಕಿನ ಅಂಗನವಾಡಿ ಹಾಗೂ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
