Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ವಿನಯ ಕುಲಕರ್ಣಿ ಹುಟ್ಟುಹಬ್ಬಕ್ಕೆ ಕ್ಷಣಗಣನೆ 

ಕಿತ್ತೂರು: ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರು ತಮ್ಮ ಬರ್ತಡೇ ನಿಮಿತ್ಯ ಜನಮನ ಕಾರ್ಯಕ್ರಮವನ್ನು ಕಿತ್ತೂರಿನಲ್ಲಿ ಅದ್ದೂರಿಯಾಗಿ ಆಚರಿಸಿಕೊಳ್ಳಲಿದ್ದಾರೆ. ಒಂದುವರೆ ಲಕ್ಷಕ್ಕಿಂತ ಹೆಚ್ಚು ಜನಸಾಗರವೇ ಹರಿದು ಬರಲಿದ್ದು,ಈ ಕಾರ್ಯಕ್ರಮಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.
ಇಂದು ಸಂಜೆ ೪ ಗಂಟೆಗೆ ಕಿತ್ತೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.  ಕಾರ್ಯಕ್ರಮದಲ್ಲಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ವಿರೋಧಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ,  ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ, ಮಾಜಿ ಸಚಿವ ಎಂ ಬಿ ಪಾಟೀಲ, ಚಿತ್ರನಟ ದರ್ಶನ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ರಾಜ್ಯದ ಎಲ್ಲ ಮಾಜಿ ಸಚಿವರು, ಶಾಸಕರು, ಮಠಾಧೀಶರು, ಮುಖಂಡರು ಸೇರಿದಂತೆ ಅನೇಕ ಗಣ್ಯಾತೀತರು  ಈ ಕಾರ್ಯಕ್ರಮದಲ್ಲಿ  ಬಾಗವಹಿಸಲಿದ್ದಾರೆ.
ಈ ಕಾರ್ಯಕ್ರಮ ಹುಟ್ಟುಹಬ್ಬಕಾರ್ಯಕ್ರಮ ಅಷ್ಟೇ ಅಲ್ಲದೇ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜನ ಶಕ್ತಿ ಪ್ರದರ್ಶನ ವಾಗಲಿದೆ. ಎಂದು ರಾಜಕೀಯ ವಿಶ್ಲೇಷಕರು  ಬಾವಿಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!