ಬೆಳಗಾವಿ:
ರಾಜ್ಯದಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪದ ಬೆನ್ನಲ್ಲೆ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಲ್ಲಿರುವ ಸಾಹಿತ್ಯ ಭವನದಿಂದ ಪ್ರಾರಂಭವಾದ ಬಿಜೆಪಿ ಪ್ರತಿಭಟನಾ ರ್ಯಾಲಿ ಜಿಲ್ಲಾ ಪಂಚಾಯತ್ ಕಚೇರಿಯವರೆಗೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಕೈಯಲ್ಲಿ ಸಿಎಂ ಡಿಸಿಎಂ ಹಾಗೂ ವಸತಿ ಸಚಿವ ಜಮೀರ್ ಅಹಮ್ಮದ್ ಇರುವ ಬಿತ್ತಿ ಚಿತ್ರ ಹಿಡಿದು ಕಾಂಗ್ರೇಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಅಲ್ಲದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ವಸತಿ ಸಚಿವ ಜಮೀರ್ ಅಹಮ್ಮದ್ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಈ ವೇಳೆ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದರು. ಇದೆ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನಚಕಮಕಿ ಏರ್ಪಟ್ಟಿತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು.

