Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ 

ಬೆಳಗಾವಿ:  ‌ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾರರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಇಂದು  ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ದರ್ಶನ್. ಹೆಚ್.ವಿ ಅವರು ಚಾಲನೆ ನೀಡಿದರು.
ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಆರಂಭಗೊಂಡ ಜಾಗೃತಿ ಜಾಥಾ ಚನ್ನಮ್ಮ ವೃತ್ತದ ಮಾರ್ಗವಾಗಿ ಸಂಚರಿಸಿ, ಬೋಗಾರ್ವೆಸ  ಸರ್ಕಲ್ ವರೆಗೆ ತಲುಪಿತು. ಸರ್ದಾರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸರ್ದಾರ್ ಶಿಕ್ಷಣ ಸಂಸ್ಥೆಯ ಪ್ರಶಿಕ್ಷಣಾರ್ಥಿಗಳು, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಈ ಸಂಧರ್ಬದಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರುಶರಾಮ ದುಡಗುಂಟಿ, ಬೆಳಗಾವಿ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ. ಎಂ ಕಾಂಬಳೆ ಉಪಸ್ಥಿತರಿದ್ದರು.
TV24 News Desk
the authorTV24 News Desk

Leave a Reply

error: Content is protected !!