ಬೆಳಗಾವಿ:
ಮಹಾರಾಷ್ಟ್ರದ ಪಶ್ಚಿಮ ಘಟ್ಟಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ಕೃಷ್ಣಾ ಒಳಹರಿವಿನ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಕೃಷ್ಣಾ ನದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಗಾರ್ ಮತ್ತು ಕುಡಚಿ ನಡುವೆ ಇರುವ ಕುಡಚಿ ಸೇತುವೆಗೆ ಭೇಟಿ ನೀಡಿ ನದಿ ನೀರಿನ ಪ್ರಮಾಣ ವಿಕ್ಷೀಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸಧ್ಯ ಕೃಷ್ಣಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೇಕ್ ಒಳಹರಿವಿದ್ದು ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಸಧ್ಯ ಯಾವುದೇ ಅಪಾಯ ಇಲ್ಲದಿದ್ದರೂ ಸಹ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.


