ಬೆಳಗಾವಿ:
ಏಳನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರಕಾರಿ ನೌಕರರಿಗೆ ವಿಸ್ತರಿಸುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂಧಿ ನೌಕರರಿಗೆ ಸರಕಾರ ವಿಸ್ತರಿಸಬೇಕೆಂದು ಆಗ್ರಹಿಸಿ ಮಂಗಳವಾರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ ನೌಕರರ ಸಂಘದ ಪದಾಧಿಕಾರಿಗಳು ಬೆಳಗಾವಿ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿ ಸೂಚನೆಯನ್ನು ಪ್ರಕಟಿಸಬೇಕು. ರಾಜ್ಯ ಸರಕಾರಿ ನೌಕರರಿಗೆ ಜಾರಿ ಮಾಡಿರುವ ಕೆಜಿಐಡಿ, ಜಿಪಿಎಫ್ ಸೌಲಭ್ಯವನ್ನು ಮಹಾನಗರ ಪಾಲಿಕೆಯ ಅಧಿಕಾರಿ, ನೌಕರರಿಗೆ ಜಾರಿ ಮಾಡಬೇಕೆಂದು ಆಗ್ರಹಿಸಿದರು.ಸರಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ, ಆರೋಗ್ಯ ಸಂಜೀವಿನಿಯನ್ನು ಪಾಲಿಕೆಯ ಅಧಿಕಾರಿಗಳಿಗೂ ಅನ್ವಯವಾಗಬೇಕು ಹಾಗೂ ಮಹಾನಗರ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುವ ಹಿರಿಯ ನೌಕರರಿಗೆ ಮುಂಬಡ್ತಿ ನೀಡಬೇಕೆಂದು ಆಗ್ರಹಿಸಿದರು.
ಮಾಲಿ ಗುಂಡಪ್ಪನವರ, ಸುರೇಶ ದ್ಯಾವಣ್ಣವರ ಸೇರಿದಂತೆ ಪಾಲಿಕೆಯ ನೌಕರರು ಉಪಸ್ಥಿತರಿದ್ದರು.
