ಬೆಳಗಾವಿಬೆಳಗಾವಿ ನಗರ

ವಿವಾದದ ಹೇಳಿಕೆಯನ್ನು ಹಿಂದಕ್ಕೆ ಪಡೆದ ಸತೀಶ ಜಾರಕಿಹೊಳಿ 

ಬೆಳಗಾವಿ : ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂದು ಹೇಳಿಕೆ ನೀಡಿದ್ದ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ರಾಜಕೀಯ ಹಾಗೂ  ಸಾರ್ವಜನಿಕ ವಲಯದಲ್ಲಿ ಬಾರಿ ಗೊಂದಲ ಸೃಷ್ಟಿ ಮಾಡಿತ್ತು, ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದಿರುವದಾಗಿ ತಿಳಿಸಿದ್ದಾರೆ. 
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕೆಂದು ಪತ್ರದ ಮುಖಾಂತರ ಸಿಎಂ ಅವರಿಗೆ ಆಗ್ರಹಿಸಿದ್ದಾರೆ. 
ದಿನಾಂಕ ೬.೧೧.೨೦೨೨ ರಂದು ನಿಪ್ಪಾಣಿಯಲ್ಲಿ ನಡೆದ ಮಾನವ ಬಂದುತ್ವ ವೇದಿಕೆ ಕರ್ನಾಟಕ ಈ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. 
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮ ಹೇಳಿಕೆಯಲ್ಲಿ ತಪ್ಪು ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುವಂತೆಯೂ ಕೋರಿದ್ದಾರೆ.
TV24 News Desk
the authorTV24 News Desk

Leave a Reply