ಬೆಳಗಾವಿ:
ಬೈಕ್ ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ಮತ್ತೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಬಳಿ ನಡೆದಿದೆ.ಮೃತರನ್ನು ಮಲಾಬಾದ್ ಗ್ರಾಮದ ನೂರಹ್ಮದ್ ಮುಲ್ಲಾ(50) ಹಾಗೂ ಸೋಹೇಲ್ ಮುಲ್ಲಾ(22) ಎಂದು ಗುರುತಿಸಲಾಗಿದ್ದು ಮತ್ತೋರ್ವ ಗಾಯಾಳು ಶಾಹಿದ್ ಎಂಬಾತ ಸಧ್ಯ ಮೀರಜ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಆತನ ಸ್ಥಿತಿಯೂ ಚಿಂತಾಜನಕವಾಗಿದೆ ಎನ್ನಲಾಗಿದೆ. ತಡರಾತ್ರಿ ಬೈಕ್ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ ನೂರಹ್ಮದ್ ಹಾಗೂ ಸೋಹೆಲ್ ಮೃತಪಟ್ಟಿದ್ದರೆ ಮೊತ್ತೋರ್ವ ಮಗ ಶಾಹಿದ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಮೃತ ತಂದೆ ಮಕ್ಕಳು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಾಬಾದ್ ಗ್ರಾಮದವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
