


ಬೆಳಗಾವಿ;
ಬೆಳಗಾವಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬೆಳಗಾವಿ ಜಂಟಿ ಸಾರಿಗೆ ಆಯುಕ್ತರ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು.ಬೆಳಗಾವಿ ನಗರದ ನಾಗರೀಕರ ಅತ್ಯಂತ ಮಹತ್ವದ ಬೇಡಿಕೆಯಾಗಿದ್ದ ಈ ಕಟ್ಟಡವು ಇಂದು ಸಾರ್ವಜನಿಕರ ಉಪಯೋಗಕ್ಕೆ ಸಚಿವರು ಮುಕ್ತಗೊಳಿಸಿದರು. ವೇದಿಕೆಯ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಹಾಗೂ ಶಾಸಕ ಮಹಾಂತೇಶ ಕೌಜಲಗಿ ಹಾಗೂ ಶಾಸಕ ಅಸೀಪ್ ಸೇಠ್ ಸೇರಿದಂತೆ ಬೂಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೇ ನಗರ ಪೊಲೀಸ್ ಆಯುಕ್ತ ಭೂಷನ್ ಬೋರಸೆ, ಜಿಲ್ಲಾ ಪಂ ಸಿಇಒ ರಾಹುಲ್ ಶಿಂಧೆ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.