ಬೆಳಗಾವಿ:
ಬೆಳಗಾವಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬೆಳಗಾವಿಯ ಉದ್ಯಮಭಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮಾಡಿತ್ತಿದ್ದ ಮೂವರುನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ಮೌಲ್ಯದ ಗಾಂಜಾ ಹಾಗೂ ಒಂದು ಕಾರು ಎರಡು ಮೊಬೈಲ್ ಜಪ್ತು ಮಾಡಿಕೊಂಡಿದ್ದಾರೆ. ಬಂಧಿತರನ್ನು ದಿಲೀಪ ದೊಡಮನಿ, ನಿಖಿಲ್ ಸೋಮಜಿಚೆ, ಹಾಗೂ ವಿರೇಶ್ ಹಿರೇಮಠ ಎಂದು ಗುರುತಿಸಲಾಗಿದೆ.ಉಧ್ಯಮಭಾಗ ಪೊಲೀಸ್ ಠಾಣೆಯ ಪಿಐ ಡಿಕೆ ಪಾಟೀಲ್ ನೇತೃತ್ವದ ತಂಡ ದಾಳಿ ನಡೆಸಿ ಗಾಂಜಾ ವಶಕ್ಕೆ ಪಡೆದಿದೆ. ಬಂಧಿತರಿಂದ 23,840 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದು ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


